Video: ಒಡಿಶಾ ರೈಲು ದುರಂತ: ಎದೆ ಝಲ್​ ಎನಿಸುತ್ತೆ ಏರಿಯಾಲ್ ವೀವ್ ದೃಶ್ಯ

Updated on: Jun 03, 2023 | 10:05 PM

ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದ್ದು, ಘಟನೆಯಲ್ಲಿ 747 ಜನರಿಗೆ ಗಾಯಗಳಾಗಿವೆ.

ಒಡಿಶಾ: ಬಹನಾಗ ರೈಲು ನಿಲ್ದಾಣದ ಬಳಿ 3 ರೈಲು ದುರಂತ (Train Accident) ದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆ ಆಗಿದ್ದು, ಘಟನೆಯಲ್ಲಿ 747 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೂಡ್ಸ್​ ರೈಲಿಗೆ ಕೋಡಮಂಡಲ್ ಎಕ್ಸ್​ಪ್ರೆಸ್ ಟ್ರೈನ್ ಡಿಕ್ಕಿ ಹೊಡೆದಿದ್ದು, ಪಕ್ಕದ ಹಳಿ ಮೇಲೆ ಬಿದ್ದಿದೆ. ಇದೇ ವೇಳೆ ಅದೇ ಟ್ರ್ಯಾಕ್​ನಲ್ಲಿ ಬಂದ ಬೆಂಗಳೂರು ಹೌರಾ ಎಕ್ಸ್​ಪ್ರೆಸ್ ರೈಲು ಬಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೋರಮಂಡಲ್ ಎಕ್ಸ್​ಪ್ರೆಸ್​ ಟ್ರೈನ್​ನಲ್ಲಿದ್ದ ಜನರು ಮೃತಪಟ್ಟಿದ್ದಾರೆ. ರೈಲು ಅಪಘಾತ ಪ್ರಕರಣದ ಎದೆ ಝಲ್ ಎನಿಸೋ ಏರಿಯಾಲ್ ವೀವ್ ದೃಶ್ಯ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More