ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಗುಳ, ಬಿಜೆಪಿ ಶಾಸಕ ಬಿಪಿ ಹರೀಶ್ ವಿಡಿಯೋ ವೈರಲ್
ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ತರಾಟೆಗೆ ತೆಗೆದುಕೊಂಡ ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಸ್ತೆ ಪಕ್ಕದಲ್ಲಿ ಇರುವ ದರ್ಗಾವನ್ನು ಟಾರ್ಗೇಟ್ ಮಾಡಿ ಶಾಸಕರು ಈ ರೀತಿ ವರ್ತಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದಾವಣಗೆರೆ, ಡಿ.11: ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ (BP Harish) ಅವರು ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ರಸ್ತೆ ಪಕ್ಕದಲ್ಲಿ ಇರುವ ದರ್ಗಾವನ್ನು ಟಾರ್ಗೇಟ್ ಮಾಡಿ ಶಾಸಕರು ಈ ರೀತಿ ವರ್ತಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹರಿಹರನಗರ ತುಂಗಭದ್ರ ಸೇತುವೆಯಿಂದ ಗಾಂಧಿ ಮೈದಾನದ ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಚಾರವಾಗಿ ಶಾಸಕ ಹರೀಶ್ ಅವರು ಲೋಕೋಪಯೋಗಿ ಇಲಾಖೆ ಇಂಜಿನೀಯರ್ ಅವರಿಗೆ ಅವಾಚ್ಯ ಶಬ್ದಗಳಿಂದ ತರಾಟೆಗೆ ತೆಗದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 11, 2023 09:17 AM
Latest Videos