ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಆಕ್ರೋಶ

Updated on: May 25, 2026 | 6:59 PM

ಕೊಯಮತ್ತೂರಿನಲ್ಲಿ ಬಾಲಕಿಯೊಬ್ಬಳ ಹತ್ಯೆಯಾದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯ ಪ್ರಗತಿಯನ್ನು ಮಾಧ್ಯಮಗಳಿಗೆ ವಿವರಿಸಲು ಪೊಲೀಸ್ ಇಲಾಖೆಯು ಪತ್ರಿಕಾಗೋಷ್ಠಿ ಕರೆದಿತ್ತು. ಈ ಗಂಭೀರವಾದ ಹತ್ಯೆ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಾಗ, ಅಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಜೋರಾಗಿ ನಗುತ್ತಾ ಉತ್ತರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಚೆನ್ನೈ, ಮೇ 25: ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯಲ್ಲಿ ನಡೆದ 10 ವರ್ಷದ ಬಾಲಕಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ನಗುತ್ತಾ ಬೇಜವಾಬ್ದಾರಿಯಿಂದ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಹರಿದಾಡುತ್ತಿದ್ದಂತೆ ಜಾಲತಾಣಗಳಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ಪೊಲೀಸರ ವರ್ತನೆಯನ್ನು ಖಂಡಿಸುತ್ತಿದ್ದಾರೆ. ಸಂತ್ರಸ್ತ ಕುಟುಂಬದ ದುಃಖಕ್ಕೆ ಕಿಂಚಿತ್ತೂ ಗೌರವ ನೀಡದ ಆ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರರು ಮತ್ತು ಮಹಿಳಾ ಸಂಘಟನೆಗಳು ತಮಿಳುನಾಡು ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More