ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಇಂದು ದೇವಾಲಯ ಪ್ರದೇಶದಿಂದ ಸಮುದ್ರ ತೀರದವರೆಗೆ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದೆ. ಈಗಾಗಲೇ 25 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಗರಿಷ್ಠ ಅವಧಿಯಲ್ಲಿ 60 ತುಕಡಿಗಳನ್ನು ಸಜ್ಜುಗೊಳಿಸಲಾಗುವುದು. ಸುಗಮ ಸಂಚಾರ ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮತ್ತು ದೇವಾಲಯದ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಪುರಿ, ಡಿಸೆಂಬರ್ 31: ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಜಗನ್ನಾಥ ಮತ್ತು ಅವರ ಸಹೋದರರ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಹೊಸ ವರ್ಷದ ಮೊದಲ ದಿನವಾದ್ದರಿಂದ ನಾಳೆಯೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ನಡುವೆ ಇಂದು ಸಂಜೆ ಪುರಿ ಜಗನ್ನಾಥ ಸ್ವಾಮಿ ದೇವಾಲಯದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಗಮನಸೆಳೆಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ