Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
ಅಮೃತಸರ-ಕತಿಹಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಹಿಂಸಾಚಾರದ ಘಟನೆ ಸಂಭವಿಸಿದೆ. ಇಬ್ಬರು ರೈಲ್ವೆ ಸಿಬ್ಬಂದಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಯಾಣಿಕ ಮಜಿಬುಲ್ ಮತ್ತು ರೈಲ್ವೆ ಸಿಬ್ಬಂದಿ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ವಿವಾದದಲ್ಲಿ ಮಧ್ಯಪ್ರವೇಶಿಸಲು ಯತ್ನಿಸಿದ ಟಿಟಿಇ ರಾಜೇಶ್ ಕುಮಾರ್‌ಗೆ ಮಜಿಬುಲ್ ಕಪಾಳಮೋಕ್ಷ ಮಾಡಿದ್ದರಿಂದ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ಇದು ಹಿಂಸಾತ್ಮಕ ಘರ್ಷಣೆಯನ್ನು ಹುಟ್ಟುಹಾಕಿತು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು, ಮಜಿಬುಲ್ ರೈಲಿನ ನೆಲದ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ತೋರಿಸುತ್ತದೆ.
ಹಲ್ಲೆಯಿಂದ ಗಾಬರಿಗೊಂಡ ಸಹ ಪ್ರಯಾಣಿಕರು ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಮಧ್ಯ ಪ್ರವೇಶಿಸಿದ್ದಾರೆ. ಫಿರೋಜಾಬಾದ್‌ನ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಮಜಿಬುಲ್ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ