Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ

Video: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ

ಅಕ್ಷಯ್​ ಪಲ್ಲಮಜಲು​​
|

Updated on: Apr 06, 2024 | 4:02 PM

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಬೆಂಬಲಿಗರೊಬ್ಬರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಮುದ್ರಣ ಮಾಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಅಷ್ಟೇ ಅಲ್ಲ ಪಿತಾಂಪುರದಿಂದ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರಲ್ಲಿ ಮನವಿ ಮಾಡಿದ್ದಾರೆ.

ಆಂಧ್ರಪ್ರದೇಶ, ಎ.06: ಲೋಕಸಭೆ ಚುನಾವಣೆ (lok sabha election) ಹತ್ತಿರವಾಗುತ್ತಿದ್ದಂತೆ ಹಲವು ಪಕ್ಷಗಳು ವಿಭಿನ್ನ ರೀತಿಯಲ್ಲಿ ತಮ್ಮ ಪಕ್ಷದ ಬಗ್ಗೆ ಹಾಗೂ ಕೆಲಸ, ಭರವಸೆ ಪ್ರಚಾರ ಮಾಡಲು ಕೆಲಸ ಮಾಡುತ್ತಿದೆ. ಇದೇ ರೀತಿಯಲ್ಲಿ ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ (pawan kalyan) ಅವರ ಜನಸೇನಾ ಪಕ್ಷದ ಬೆಂಬಲಿಗರೊಬ್ಬರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಮುದ್ರಣ ಮಾಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಅಷ್ಟೇ ಅಲ್ಲ ಪಿತಾಂಪುರದಿಂದ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರಲ್ಲಿ ಮನವಿ ಮಾಡಿದ್ದಾರೆ. ಈ ವ್ಯಕ್ತಿ ಆಂಧ್ರಪ್ರದೇಶದ ಕಾಕಿನಾಡ ನಿವಾಸಿ. ಈ ಬಗ್ಗೆ ಎಎನ್​​​ಐ ವಿಡಿಯೋವೊಂದನ್ನು ಹಂಚಿಕೊಂಡಿದೆ. ತೆಲುಗು ಸೂಪರ್ ಸ್ಟಾರ್ ಪಾವಲ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ