Video: ತಮಿಳುನಾಡು: ರಸ್ತೆಯಿಂದ ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿ

Updated on: Jul 17, 2025 | 9:57 AM

ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನು ರಸ್ತೆಯಿಂದ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗುಮ್ಮಿಡಿಪೂಂಡಿ ಪಟ್ಟಣದ ಬಳಿಯ ತಿರುವಲ್ಲೂರು ಜಿಲ್ಲೆಯಲ್ಲಿ ಜುಲೈ 12ರಂದು ಘಟನೆ ನಡೆದಿದೆ. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ. 10 ವರ್ಷದ ಬಾಲಕಿ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಅಪಹರಿಸಲು ಪ್ರಯತ್ನಿಸಿದ್ದ.

ತಮಿಳುನಾಡು, ಜುಲೈ 17: ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನು ರಸ್ತೆಯಿಂದ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗುಮ್ಮಿಡಿಪೂಂಡಿ ಪಟ್ಟಣದ ಬಳಿಯ ತಿರುವಲ್ಲೂರು ಜಿಲ್ಲೆಯಲ್ಲಿ ಜುಲೈ 12ರಂದು ಘಟನೆ ನಡೆದಿದೆ. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ತಮ್ಮ ಎಕ್ಸ್ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ. 10 ವರ್ಷದ ಬಾಲಕಿ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಅಪಹರಿಸಲು ಪ್ರಯತ್ನಿಸಿದ್ದ. ಬಾಲಕಿ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.ಆಕೆ ನಾಕ್ಕನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಬಾಲಕಿ ಘಟನೆಯ ಬಗ್ಗೆ ತನ್ನ ಅಜ್ಜಿಗೆ ತಿಳಿಸಿದ್ದು, ಅವರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ವೈರಲ್ ಆಗಿದ್ದು, ಈ ಪ್ರದೇಶದ ಕಾನೂನು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಹಗಲಿನಲ್ಲಿಯೇ ಸಾರ್ವಜನಿಕವಾಗಿ ಆರೋಪಿ ಅಷ್ಟು ರ್ದೈದಿಂದ ನೀಚ ಕೆಲಸ ಮಾಡಿದ್ದಾನೆ, ಎಷ್ಟು ಹೆಣ್ಣುಮಕ್ಕಳ ಮೇಲೆ ಆತ ಲೈಂಗಿಕ ದೌರ್ಜನ್ಯವೆಸಗಿರಬಹುದು. ಕೂಡಲೇ ಆತನನ್ನು ಬಂಧಿಸುವಂತೆ ಅಣ್ಣಾಮಲೈ ಒತ್ತಾಯಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ