AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

ನಯನಾ ರಾಜೀವ್
|

Updated on:Dec 27, 2024 | 12:10 PM

Share

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ತಮ್ಮ ಮನೆ ಎದುರು ತಮಗೆ ತಾವೇ ಚಾಟಿ ಏಟನ್ನು ಕೊಟ್ಟುಕೊಂಡು ಪ್ರತಿಭಟನೆ ನಡೆಸಿದರು. ಹಸಿರು ಧೋತಿ ಧರಿಸಿ, ಟಾಪ್ ಶರ್ಟ್ ಧರಿಸದೇ ಮನೆಯಿಂದ ಹೊರಬಂದ ಅಣ್ಣಾಮಲೈ, ಹಗ್ಗದಿಂದ ಮಾಡಿದ ಚಾವಟಿಯಿಂದ ಚಾಟಿ ಬೀಸಿಕೊಂಡು ತಮ್ಮ ದೇಹವನ್ನೇ ದಂಡನೆಗೆ ಒಳಪಡಿಸಿಕೊಂಡರು. ನಾನು ಈ ಮೊದಲೇ ಹೇಳಿದಂತೆ ಪಾದಗಳಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಹೇಳಿದ್ದೇನೆ ಅದರಂತೆ ಅವುಗಳನ್ನು ತೆಗೆದಿದ್ದೇನೆ ಎಂದು ಇದೇ ವೇಳೆ ಅಣ್ಣಾಮಲೈ ಹೇಳಿದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.
ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್​ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್​ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.

ಪೊಲೀಸರು ಜ್ಞಾನಶೇಖರನ್​ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್​ಮೇಲ್​ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ದ ಸುಮಾರು 17 ಕ್ರಿಮಿನಲ್​ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರ್ಯವಾಗಿ ಓಡಾಡುತ್ತಿದ್ದಾನೆ.

ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ ,  ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 27, 2024 12:10 PM