Video: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಯುವಕ ಸಾವು
ಈ ಅಘಾತಕಾರಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಇದಕ್ಕಿದ್ದಂತೆ ಕುಸಿದು ಬೀಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ವಾರಣಾಸಿ: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಕಳೆದ ಹತ್ತು ವರ್ಷಗಳಿಂದ ಜಿಮ್‌ನಲ್ಲಿ ಮತ್ತು ವಿವಿಧ ಫಿಟ್‌ನೆಸ್ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ದೀಪಕ್ ಗುಪ್ತಾ(32) ಮೃತಪಟ್ಟಿರುವ ವ್ಯಕ್ತಿ. ಏಪ್ರಿಲ್ 30 ರಂದು ಎಂದಿನಂತೆ ಜಿಮ್ಗೆ ಹೋಗಿದ್ದ ದೀಪಕ್ ಕುಮಾರ್. ಆದರೆ ವರ್ಕೌಟ್ ಮಾಡುತ್ತಿರುವಾಗಲೇ ಇದ್ದಕ್ಕಿದಂತೆ ಕುಸಿದುಬಿದ್ದಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದೀಪಕ್ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ವೈದ್ಯಕೀಯ ವರದಿ ಬಂದ ನಂತರ ಅವರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಈ ಅಘಾತಕಾರಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಇದಕ್ಕಿದ್ದಂತೆ ಕುಸಿದು ಬೀಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಓದಿ: K. Annamalai: ನೇಹಾ ಕೊಲೆ ಬಗ್ಗೆ ಕೆ ಅಣ್ಣಾಮಲೈ ಮಾತು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

