Video: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಯುವಕ ಸಾವು

|

Updated on: May 03, 2024 | 3:25 PM

ಈ ಅಘಾತಕಾರಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಇದಕ್ಕಿದ್ದಂತೆ ಕುಸಿದು ಬೀಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಾರಣಾಸಿ: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಕಳೆದ ಹತ್ತು ವರ್ಷಗಳಿಂದ ಜಿಮ್‌ನಲ್ಲಿ ಮತ್ತು ವಿವಿಧ ಫಿಟ್‌ನೆಸ್ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ದೀಪಕ್ ಗುಪ್ತಾ(32) ಮೃತಪಟ್ಟಿರುವ ವ್ಯಕ್ತಿ. ಏಪ್ರಿಲ್​ 30 ರಂದು ಎಂದಿನಂತೆ ಜಿಮ್​​ಗೆ ಹೋಗಿದ್ದ ದೀಪಕ್ ಕುಮಾರ್​. ಆದರೆ ವರ್ಕೌಟ್ ಮಾಡುತ್ತಿರುವಾಗಲೇ ಇದ್ದಕ್ಕಿದಂತೆ ಕುಸಿದುಬಿದ್ದಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದೀಪಕ್​ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ವೈದ್ಯಕೀಯ ವರದಿ ಬಂದ ನಂತರ ಅವರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಈ ಅಘಾತಕಾರಿ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಇದಕ್ಕಿದ್ದಂತೆ ಕುಸಿದು ಬೀಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:  K. Annamalai: ನೇಹಾ ಕೊಲೆ ಬಗ್ಗೆ ಕೆ ಅಣ್ಣಾಮಲೈ ಮಾತು: ಕಾಂಗ್ರೆಸ್​ ವಿರುದ್ಧ ವಾಗ್ದಾಳಿ

Follow us on