ಪೂರ್ಣರೂಪಿ ಬಾಲ ರಾಮನ ದರ್ಶನ: ಟಿವಿ 9 ಚಾನಲ್​​ಗೆ ಆರತಿ ಬೆಳಗಿದ ಗೃಹಿಣಿ -ವಿಡಿಯೋ ವೈರಲ್

Edited By: ಸಾಧು ಶ್ರೀನಾಥ್​

Updated on: Jan 22, 2024 | 3:30 PM

ಬೆಳಗಾವಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಇಂದು ಅದ್ದೂರಿಯಾಗಿ ನೆರವೇರಿತು. ಕಣ್ಣು ಕೆತ್ತನೆ ಬಳಿಕ ಶ್ರೀರಾಮಚಂದ್ರ ಪೂರ್ಣರೂಪಿಯಾಗಿ ಕಾಣಿಸುತ್ತಿದ್ದಂತೆ ಗೃಹಿಣಿಯೊಬ್ಬರು ಆರತಿ ಬೆಳಗಿ ಪೂಜೆ ಸಲ್ಲಿಸುತ್ತಾ ಭಾವಪರವಶರಾದರು.

ಬೆಳಗಾವಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಇಂದು ಅದ್ದೂರಿಯಾಗಿ ನೆರವೇರಿತು. ಕಣ್ಣು ಕೆತ್ತನೆ ಬಳಿಕ ಶ್ರೀರಾಮಚಂದ್ರ ಪೂರ್ಣರೂಪಿಯಾಗಿ ಕಾಣಿಸುತ್ತಿದ್ದಂತೆ ಗೃಹಿಣಿಯೊಬ್ಬರು ಆರತಿ ಬೆಳಗಿ ಪೂಜೆ ಸಲ್ಲಿಸುತ್ತಾ ಭಾವಪರವಶರಾದರು.

ಟಿವಿ9 ಕನ್ನಡದಲ್ಲಿ ರಾಮನ ದರ್ಶನ ಪಡೆದ ಕುಟುಂಬ:
ಟಿವಿ9 ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಶ್ರೀರಾಮನ ದರ್ಶನ ಆಗ್ತಿದ್ದಂತೆ ಬೆಳಗಾವಿ ನಗರದ ವೈಭವ ನಗರದ ರೂಪಾಲಿ ಕೊಟಿ ಎಂಬುವವವರು ಟಿವಿಗೆ ಆರತಿ ಬೆಳೆಗಿ ಪೂಜೆ ಸಲ್ಲಿಸಿದರು. ಹೀಗೆ ಆರತಿ ಬೆಳಗಿ ಪೂಜಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More