Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ

Video: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ

ಅಕ್ಷತಾ ವರ್ಕಾಡಿ
|

Updated on: Apr 13, 2024 | 5:07 PM

ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿಕೆಸಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.

ಮುಂಬೈ: ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿಕೆಸಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದ ಸುತ್ತಲೂ ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಬಲರಾಮ ಕಟ್ಟಡದ ಬಳಿಯಿರುವ ಬಿಕೆಸಿಯಲ್ಲಿರುವ ಕೌಟುಂಬಿಕ ನ್ಯಾಯಾಲಯದ ಕಟ್ಟಡದಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಪ್ರವೃತ್ತವಾಗಿದ್ದು, ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನದಲ್ಲಿ ಕೆಲಸ ನಡೆಯುತ್ತಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ. ಸದ್ಯ ಇನ್ನಷ್ಟೇ ತಿಳಿಯಬೇಕಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಲು ಮುಂದಾಗಿದೆ. ಈ ವೇಳೆ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಗಳು ತಿಳಿಸಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ