Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಅದಾಗಲೇ ರೈಲು ಬಂದು ನಿಂತಿತ್ತು ಮಹಿಳೆ ರೈಲು ಹತ್ತಿದ್ದರು ಆದರೆ ಮಕ್ಕಳು ಪ್ಲಾಟ್​ಫಾರ್ಮ್​ನಲ್ಲಿಯೇ ಉಳಿದಿದ್ದರು, ರೈಲು ಹೊರಟಿತ್ತು, ಮಕ್ಕಳು ಅಲ್ಲೇ ಇರುವುದ ನೋಡಿ ಮಹಿಳೆ ರೈಲಿನಿಂದ ಕೆಳಗೆ ಜಿಗಿದಿದ್ದಾರೆ, ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದಾರೆ. ಕೂಡಲೇ ರೈಲ್ವೆ ಪೊಲೀಸ್ ಆಕೆಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆ ಕಾನ್ಪುರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಕೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೆಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದರು. ಘಟನೆಯ 11 ಸೆಕೆಂಡುಗಳ ವೀಡಿಯೊದಲ್ಲಿ ಇಬ್ಬರು ಪೊಲೀಸರು ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದುಕೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us