ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

Edited By:

Updated on: May 29, 2026 | 4:15 PM

ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಭರಪೂರ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತಾ ಸಭೆ ನಡೆಸಲಾಗಿದೆ. ಶಾಸಕಾಂಗ ಪಕ್ಷದ ಸಭೆ ನಾಳೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ. ಹೈಕಮಾಂಡ್ ಸೂಚನೆಯಂತೆ ಬಹುತೇಕ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ವಿಧಾನಸೌಧದ ಮುಂಭಾಗದಲ್ಲೇ ಪದಗ್ರಹಣ ಮಾಡಬೇಕು ಎಂಬುದು ಅವರ ಅಭಿಲಾಷೆಯಾಗಿದೆ. ಹೀಗಾಗಿ, ಪ್ರಮಾಣ ವಚನ ಸಮಾರಂಭಕ್ಕೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆಗಳು ತೀವ್ರ ಗತಿಯಲ್ಲಿ ನಡೆಯುತ್ತಿವೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More