11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ

Updated on: Jun 10, 2025 | 12:37 PM

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಇವರು ಮದುವೆ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈಗ ಈ ದಂಪತಿಗೆ ವಿವಾಹ ವಾರ್ಷಿಕೋತ್ಸವ. ಇದಕ್ಕೆ ಸಂಬಂಧಿಸಿದಂತೆ ಒಂದು ಸುಂದರ ವಿಡಿಯೋನ ಹಂಚಿಕೊಂಡಿದ್ದಾರೆ ವಿಘ್ನೇಶ್. ಆ ಸಂದರ್ಭದ ವಿಡಿಯೋ ಇಲ್ಲಿ ಇದೆ.

ನಟಿ ನಯನಾತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ದಾಂಪತ್ಯಕ್ಕೆ ಮೂರು ವರ್ಷ. ಇದಕ್ಕೆ ವಿಘ್ನೇಶ್ ಅವರು ಪತ್ನಿಗೆ ಶುಭಕೋರಿದ್ದಾರೆ. ಈ ವೇಳೆ ತಮ್ಮಿಬ್ಬರ ಪ್ರೀತಿಗೆ 11 ವರ್ಷಗಳು ಕಳೆದಿವೆ ಎಂಬುದನ್ನು ಅವರು ಹೇಳಿದ್ದಾರೆ. ‘ನಾನುಮ್ ರೌಡಿ ದಾನ್’ ಸಿನಿಮಾದಲ್ಲಿ ನಯನತಾರಾ ನಟಿಸಿದರು. ಈ ಚಿತ್ರಕ್ಕೆ ವಿಘ್ನೇಶ್ ಶಿವನ್ ನಿರ್ದೇಶನ ಇತ್ತು. ಈ ಸಿನಿಮಾ ರಿಲೀಸ್ ಆಗಿದ್ದು 2015ರಲ್ಲಿ. ಆದರೆ, ಚಿತ್ರ ಸೆಟ್ಟೇರಿದ್ದು 2014ರಲ್ಲಿ. ಈ ವೇಳೆ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ಹೀಗಾಗಿ ಇವರ ಪಯಣಕ್ಕೆ 11 ವರ್ಷ ತುಂಬಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More