ದೋಷಾರೋಪ ಪಟ್ಟಿ ಇಲ್ಲ, ವಿಚಾರಣೆಯೂ ಇಲ್ಲ, ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ನಡೆದ ಇಡಿ ದಾಳಿಯ ಕುರಿತು ಉದ್ಯಮಿ ವಿಜಯ್ ಮಲ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಡಿ ಬಿಡುಗಡೆ ಮಾಡಿದ ದಾಖಲೆಗಳನ್ನು ಪೋಸ್ಟ್ ಮಾಡಿ, ಯಾವುದೇ ದೋಷಾರೋಪ ಪಟ್ಟಿ ಇಲ್ಲ ಅಥವಾ ವಿಚಾರಣೆಯೂ ಇಲ್ಲದೆ ಇದು ಕೇವಲ ವ್ಯಕ್ತಿತ್ವ ಹನನ ಎಂದು ಟೀಕಿಸಿದ್ದಾರೆ. ಬೇರೆ ದೇಶಗಳಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಮಲ್ಯ ಎಕ್ಸ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 12: ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ವಿಜಯ್ ಮಲ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಡಿ ಅಧಿಕಾರಿಗಳು ಬಿಡುಗಡೆ ಮಾಡಿದ ದಾಖಲೆಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಜಯ್ ಮಲ್ಯ, ಇಡಿ ಇದನ್ನು ದೊಡ್ಡ ಸಾಧನೆಯಂತೆ ಬಿಂಬಿಸುತ್ತಿದೆ ಎಂದು ಟೀಕಿಸಿದ್ದಾರೆ. ಇಡಿ ದಾಳಿಯ ನಂತರ ಯಾವುದೇ ದೋಷಾರೋಪ ಪಟ್ಟಿ ಇಲ್ಲ, ವಿಚಾರಣೆಯೂ ಇಲ್ಲ ಎಂದು ಮಲ್ಯ ಹೇಳಿದ್ದಾರೆ. ಇದು ಸಾರ್ವಜನಿಕವಾಗಿ ಕೇವಲ ವ್ಯಕ್ತಿತ್ವ ಹನನಕ್ಕೆ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಬೇರೆ ಯಾವುದೇ ದೇಶದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಮಲ್ಯ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ದಯವಿಟ್ಟು ನೀವೇ ಸ್ವತಃ ಯೋಚಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿರುವ ವಿಜಯ್ ಮಲ್ಯ, ಇಡಿ ಕ್ರಮದ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
