ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ

Updated on: Jun 16, 2026 | 4:54 PM

ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಜಯಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಈಡಿಗ ಸಂಪ್ರದಾಯದಂತೆ ಜಯಮ್ಮ ಅವರ ಅಂತ್ಯಕ್ರಿಯೆ ನಡೆಯುತ್ತಿದೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಜಯಮ್ಮ ಅವರ ಅಂತ್ಯಕ್ರಿಯೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More