ವಿಜಯ್​​ ಸೇತುಪತಿ ಮೇಲೆ ಹಲ್ಲೆಯಾದ ದೃಶ್ಯದ ವಿಡಿಯೋ ಇಲ್ಲಿದೆ

ವಿಜಯ್​​ ಸೇತುಪತಿ ಮೇಲೆ ಹಲ್ಲೆಯಾದ ದೃಶ್ಯದ ವಿಡಿಯೋ ಇಲ್ಲಿದೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 03, 2021 | 8:24 PM

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ.

ನಟ ವಿಜಯ್​ ಸೇತುಪತಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್​ ಅವರು ಬೆಂಗಳೂರಿಗೆ ಆಗಮಿಸುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿ ಆಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ:  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

Published on: Nov 03, 2021 08:13 PM