ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ

Updated on: Feb 16, 2026 | 8:58 PM

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ಕೊಲೆ ಆರೋಪದ ಮೇಲೆ ಜೈಲಿನಲ್ಲಿ ಇದ್ದಾರೆ. ಇಂದು (ಫೆ.16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ ಅವರ ಮುಖದಲ್ಲಿ ನಗು ಕಾಣಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು (ಫೆಬ್ರವರಿ 16) ಅವರ ಜನ್ಮದಿನ. ಅವರನ್ನು ನೋಡಲು ಕುಟುಂಬದವರು ಮತ್ತು ಆಪ್ತರು ಬಂದಿದ್ದರು. ಪತ್ನಿ ವಿಜಯಲಕ್ಷ್ಮಿ ದರ್ಶನ್, ಮಗ ವಿನೀಶ್, ಸಹೋದರ ದಿನಕರ್ ತೂಗುದೀಪ್, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಟ ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಯಲ್ಲಿ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ವಾಪಸ್ ತೆರಳುವಾಗಿ ವಿಜಯಲಕ್ಷ್ಮಿ (Vijayalakshmi Darshan) ಅವರ ಮುಖದಲ್ಲಿ ನಗು ಕಾಣಿಸಿದೆ. ಅದನ್ನು ಕಂಡು ಅಭಿಮಾನಿಗಳಿಗೆ ಸಮಾಧಾನ ಆಗಿದೆ. ಆದಷ್ಟು ಬೇಗ ದರ್ಶನ್ ಹೊರಗೆ ಬರಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ. ಹುಟ್ಟುಹಬ್ಬದ ಸಲುವಾಗಿ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More