AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ರಾಜೇಶ್ ದುಗ್ಗುಮನೆ
|

Updated on: May 18, 2026 | 11:36 AM

Share

ಪತಿಯನ್ನು ಜೈಲಿನಿಂದ ಹೊರತರಲು ವಿಜಯಲಕ್ಷ್ಮೀ ಅವರು ಮೊದಲಿನಿಂದಲೂ ಹರಸಾಹಸ ಪಡುತ್ತಿದ್ದಾರೆ. ಒಂದು ಕಡೆ ವಕೀಲರ ಮೂಲಕ ನಿರಂತರ ಕಾನೂನು ಹೋರಾಟ ನಡೆಸುತ್ತಿದ್ದರೆ, ಇನ್ನೊಂದೆಡೆ ದರ್ಶನ್ ಹೆಸರಿನಲ್ಲಿ ವಿಶೇಷ ಪೂಜೆ, ಹರಕೆಗಳನ್ನು ಹೊತ್ತು ನಿರಂತರವಾಗಿ 'ಟೆಂಪಲ್ ರನ್' ಮಾಡುತ್ತಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲೂ ಹಿನ್ನೆಡೆಯಾಗಿರುವುದರಿಂದ ವಿಜಯಲಕ್ಷ್ಮೀ ಅವರ ಹೋರಾಟಕ್ಕೆ ಸದ್ಯಕ್ಕೆ ಜಯ ಸಿಕ್ಕಿಲ್ಲ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್‌ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ.

ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಫೋಟೋವನ್ನು ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ, ಅದಕ್ಕೆ ಯಾವುದೇ ಸುದೀರ್ಘ ಬರಹ ಬರೆಯದೇ ಕೇವಲ ‘ಹಾರ್ಟ್ ಬ್ರೇಕ್’ ಎಮೋಜಿ ಹಾಕುವ ಮೂಲಕ ತೀವ್ರ ಬೇಸರ ಹಾಗೂ ನೋವನ್ನು ವ್ಯಕ್ತಪಡಿಸಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More