ದರ್ಶನ್ ಜಾಮೀನು ಪಡೆದ ಬಳಿಕ ಬಳ್ಳಾರಿ ದುರ್ಗಾದೇವಿಗೆ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ
ದರ್ಶನ್ ಅವರಿಗೆ ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮಿ ಅವರು ಪಟ್ಟಿರುವ ಕಷ್ಟ ಅಷ್ಟಿಷ್ಟಲ್ಲ. ಕಳೆದ ನಾಲ್ಕು ತಿಂಗಳಿಂದ ಅವರು ಅಲೆದಾಡಿದ್ದಾರೆ. ಇಂದು (ಅಕ್ಟೋಬರ್ 30) ಹೈಕೋರ್ಟ್ನಲ್ಲಿ ದರ್ಶನ್ಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಯ ದುರ್ಗಾದೇವಿ ದೇವಸ್ಥಾನಕ್ಕೆ ತೆರಳಿ ವಿಜಯಲಕ್ಷ್ಮಿ ಅವರು ಪೂಜೆ ಸಲ್ಲಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಬಳ್ಳಾರಿ ಜೈಲಿನಲ್ಲಿ ಇರುವ ಅವರು ಈಗ ಹೊರಬರಲಿದ್ದಾರೆ. ಪತಿಗೆ ಜಾಮೀನು ಸಿಕ್ಕಿರುವುದರಿಂದ ವಿಜಯಲಕ್ಷ್ಮಿ ಅವರು ಬಳ್ಳಾರಿಯಲ್ಲಿ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಆ ಸಂದರ್ಭದ ವಿಡಿಯೋ ಇಲ್ಲಿದೆ. ಜಾಮೀನು ಸಿಕ್ಕಿದ್ದಕ್ಕೆ ದರ್ಶನ್ ಅಭಿಮಾನಿಗಳಿಗೆ ತುಂಬಾ ಸಂತಸ ಆಗಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಪ್ರತಿಕ್ರಿಯಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
