ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ನಟ ದರ್ಶನ್ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಇಂದು (ಡಿಸೆಂಬರ್ 31) ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ (Darshan) ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಇಂದು (ಡಿ.31) ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗ ದಿಢೀರ್ ಭೇಟಿ ನೀಡಿದ್ದಾರೆ. ಸಿಸಿಬಿ ಡಿಸಿಪಿ-2 ರಾಜಾ ಖಾಸಿಮ್ ಕಮೀಷನರ್ ಕೊಠಡಿಗೆ ವಕೀಲರ ಜೊತೆಗೆ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ತಮಗೆ ಬಂದಿರುವ ಅಶ್ಲೀಲ ಕಮೆಂಟ್ ಮತ್ತು ಪೋಸ್ಟ್ ಬಗ್ಗೆ ಇತ್ತೀಚೆಗೆ ವಿಜಯಲಕ್ಷ್ಮಿ ಅವರು ದೂರು ನೀಡಿದ್ದರು. ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
