ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್

Updated on: Feb 16, 2026 | 6:56 PM

ನಟ ದರ್ಶನ್ ಅವರಿಗೆ ಇಂದು (ಫೆ.16) ಹುಟ್ಟುಹಬ್ಬ. ಆದರೆ ಈಗ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆದ್ದರಿಂದ ಅಭಿಮಾನಿಗಳಿಗೆ ಹಾಗೂ ಕುಟುಂಬದವರಿಗೆ ಬೇಸರ ಇದೆ. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ ಅವರು ಜೈಲಿಗೆ ಭೇಟಿ ನೀಡಿ ವಿಶ್ ಮಾಡಿದ್ದಾರೆ.

ಇಂದು (ಫೆಬ್ರವರಿ 16) ನಟ ದರ್ಶನ್ (Darshan) ಅವರ ಹುಟ್ಟುಹಬ್ಬ. ಆದರೆ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಬೇಸರ ಇದೆ. ಒಂದು ವೇಳೆ ದರ್ಶನ್ ಅವರು ಹೊರಗಡೆ ಇದ್ದಿದ್ದರೆ ಜನ್ಮದಿನದ ಸಂಭ್ರಮ ಜೋರಾಗಿ ಇರುತ್ತಿತ್ತು. ಇಂದು ಪತ್ನಿ ವಿಜಯಲಕ್ಷ್ಮಿ (Vijayalakshmi Darshan), ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ, ನಟ ಧನ್ವೀರ್ ಮತ್ತು ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಪ್ರಮುಖ ಆರೋಪಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More