ಬಳ್ಳಾರಿ ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ

Updated on: Oct 22, 2024 | 9:16 PM

ವಿಜಯಲಕ್ಷ್ಮಿ ಅವರು ದರ್ಶನ್​ ಪರವಾಗಿ ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಬಳ್ಳಾರಿ ಜೈಲಿಗೆ ತೆರಳಿ ಪತಿಯನ್ನು ಅವರು ಭೇಟಿ ಮಾಡಿದ್ದಾರೆ. ಆದರೆ ಈ ಭೇಟಿಯ ಬಳಿಕ ಅವರ ಮುಖ ಬಾಡಿತ್ತು. ತುಂಬ ಬೇಸರದಲ್ಲೇ ಅವರು ಜೈಲಿನಿಂದ ಹೊರಟಿದ್ದಾರೆ. ದಿನದಿಂದ ದಿನಕ್ಕೆ ದರ್ಶನ್ ಅವರ ಆರೋಗ್ಯ ಹದಗೆಡುತ್ತಿದೆ. ಹಾಗಾಗಿ ವಿಜಯಲಕ್ಷ್ಮಿ ಅವರಿಗೆ ಚಿಂತೆ ಹೆಚ್ಚಿದಂತಿದೆ.

ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದ ದರ್ಶನ್ ಅವರಿಗೆ ಇತ್ತೀಚೆಗೆ ನಿರಾಸೆ ಆಯಿತು. ಈಗ ಅವರು ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ ಇಂದು (ಅಕ್ಟೋಬರ್​ 22) ಬಳ್ಳಾರಿ ಜೈಲಿಗೆ ಬಂದಿದ್ದರು. ವಾಪಸ್ ತೆರಳುವಾಗ ಅವರು ಬೇಸರ ಮಾಡಿಕೊಂಡಿದ್ದರು. ದರ್ಶನ್ ಅವರ ಅನಾರೋಗ್ಯದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೂ ವಿಜಯಲಕ್ಷ್ಮಿ ಉತ್ತರಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More