ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್

Updated on: Sep 01, 2026 | 5:43 PM

Darshan Thoogudeepa in Jail: ವಿಜಯಲಕ್ಷ್ಮಿ ಅವರ ಜೊತೆಗೆ ಝೈದ್ ಖಾನ್ ಜೈಲಿಗೆ ಬಂದಿದ್ದರು. ಅವರು ಮಾತ್ರವೇ ಅಲ್ಲದೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಜೈಲಿಗೆ ಭೇಟಿ ನೀಡಿದ್ದರು. ವಿಜಯಲಕ್ಷ್ಮಿ ಮತ್ತು ಧನ್ವೀರ್ ಗೌಡ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂದು ಕೆಲ ದಿನಗಳ ಹಿಂದೆ ಸುದ್ದಿ ಹರಡಿತ್ತು. ಅದರ ಬೆನ್ನಲ್ಲೆ ಇದೀಗ ವಿಜಯಲಕ್ಷ್ಮಿ ಅವರು ಝೈದ್ ಖಾನ್ ಅವರನ್ನು ಜೊತೆಗೆ ಕರೆದುಕೊಂಡು ಬಂದಿರುವುದು ಕುತೂಹಲ ಮೂಡಿಸಿದೆ. ಝೈದ್ ಖಾನ್, ಸಚಿವ ಜಮೀರ್ ಅಹ್ಮದ್ ಪುತ್ರ ಆಗಿದ್ದು, ಕೆಲವು ಕನ್ನಡ ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ವಿಡಿಯೋ ನೋಡಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ (Darshan) ಭೇಟಿಗೆ ಇಂದು (ಸೆಪ್ಟೆಂಬರ್ 1) ಪತ್ನಿ ವಿಜಯಲಕ್ಷ್ಮಿ ದರ್ಶನ್ ಬಂದಿದ್ದರು. ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿಗೆ ಬಂದಾಗ ಅವರೊಟ್ಟಿಗೆ ನಟ, ದರ್ಶನ್ ಆಪ್ತ ಧನ್ವೀರ್ ಗೌಡ ಬರುತ್ತಿದ್ದರು. ಆದರೆ ಈ ಬಾರಿ ವಿಜಯಲಕ್ಷ್ಮಿ ಅವರ ಜೊತೆಗೆ ಝೈದ್ ಖಾನ್ ಜೈಲಿಗೆ ಬಂದಿದ್ದರು. ಅವರು ಮಾತ್ರವೇ ಅಲ್ಲದೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಬಂದಿದ್ದರು. ವಿಜಯಲಕ್ಷ್ಮಿ ಮತ್ತು ಧನ್ವೀರ್ ಗೌಡ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂದು ಕೆಲ ದಿನಗಳ ಹಿಂದೆ ಸುದ್ದಿ ಹರಡಿತ್ತು. ಅದರ ಬೆನ್ನಲ್ಲೆ ಇದೀಗ ವಿಜಯಲಕ್ಷ್ಮಿ ಅವರು ಝೈದ್ ಖಾನ್ ಅವರನ್ನು ಜೊತೆಗೆ ಕರೆದುಕೊಂಡು ಬಂದಿರುವುದು ಕುತೂಹಲ ಮೂಡಿಸಿದೆ. ಝೈದ್ ಖಾನ್, ಸಚಿವ ಜಮೀರ್ ಅಹ್ಮದ್ ಪುತ್ರ ಆಗಿದ್ದು, ಕೆಲವು ಕನ್ನಡ ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us