ಧನ್ವೀರ್ ವಿವಾದ: ದರ್ಶನ್ ನೋಡಲು ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಈ ಮೊದಲು ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ಅವರು ಧನ್ವೀರ್ ಜೊತೆ ಜೈಲಿಗೆ ಬರುತ್ತಿದ್ದರು. ಆದರೆ ಇತ್ತೀಚಿನ ಬೆಳವಣಿಗೆಗಳ ಬಳಿಕ ವಿಜಯಲಕ್ಷ್ಮಿ ಅವರು ಝೈದ್ ಖಾನ್ ಜೊತೆ ಜೈಲಿಗೆ ಭೇಟಿ ನೀಡಿದ್ದಾರೆ. ವಕೀಲರ ಜೊತೆ ಜೈಲಿಗೆ ಬಂದ ಅವರು ದರ್ಶನ್ ಅವರನ್ನು ಮಾತನಾಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇತ್ತ, ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಆಪ್ತ ಧನ್ವೀರ್ ನಡುವೆ ಮನಸ್ತಾಪ ಉಂಟಾಗಿದೆ. ಧನ್ವೀರ್ ಅವರು ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ತುಣುಕುಗಳು ವೈರಲ್ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ನಟ ಝೈದ್ ಖಾನ್ ಬಗ್ಗೆಯೂ ಧನ್ವೀರ್ ಅವರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ ಎಂಬ ಆರೋಪ ಇದೆ. ಈ ಮೊದಲು ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ಅವರು ಧನ್ವೀರ್ ಜೊತೆ ಜೈಲಿಗೆ ಬರುತ್ತಿದ್ದರು. ಆದರೆ ಇತ್ತೀಚಿನ ಬೆಳವಣಿಗೆಗಳ ಪರಿಣಾಮದಿಂದ ವಿಜಯಲಕ್ಷ್ಮಿ ಅವರು ಝೈದ್ ಖಾನ್ ಜೊತೆ ಜೈಲಿಗೆ ಭೇಟಿ ನೀಡಿದ್ದಾರೆ. ವಕೀಲರ ಜೊತೆ ಜೈಲಿಗೆ ಬಂದ ಅವರು ದರ್ಶನ್ ಅವರನ್ನು ಮಾತನಾಡಿಸಿದ್ದಾರೆ. ಈ ಭೇಟಿಯಿಂದಾಗಿ ಕುತೂಹಲ ಹೆಚ್ಚಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಧನ್ವೀರ್ ವಿರುದ್ಧ ದರ್ಶನ್ ಅಭಿಮಾನಿಗಳು ಹಾಗೂ ಝೈದ್ ಖಾನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

