ವಿಜಯನಗರ: ಗೋಣಿ ಬಸವೇಶ್ವರ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತ ಸಾಗರ

TV9 Digital Desk

| Edited By: Kiran Hanumant Madar

Updated on: Mar 04, 2023 | 11:41 AM

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು.

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ಗೋಣಿ ಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಐತಿಹಾಸಿಕ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಅಪಾರ ಭಕ್ತ ಸಾಗರದ ನಡುವೆ ಗೋಣಿ ಬಸವೇಶ್ವರ ರಥೋತ್ಸವ ಸಂಭ್ರಮದಿಂದ ನಡೆಯಿತು. ಇನ್ನು ಗೋಣಿಬಸವೇಶ್ವರ ದರ್ಶನ ಪಡೆದರೆ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲೆ ಜಾತ್ರೆಗೆ ನಿರೀಕ್ಷೆ ಮಿರಿ ಭಕ್ತರು ಸೇರಿದ್ದು ವಿಶೇಷವಾಗಿತ್ತು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada