ಕರ್ನಾಟಕದ 31ನೇ ಜಿಲ್ಲೆಯಾಗಿ ಉದಯಿಸಲಿದೆ ವಿಜಯನಗರ; ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧ
ಎರಡು ದಿನವೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜ್ಯ, ಹೊರ ರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಇಂದು (ಅ.2) ವಿಜಯನಗರ ರಾಜ್ಯದ 31ನೇ ನೂತನ ಜಿಲ್ಲೆಯಾಗಿ ಉದಯವಾಗಲಿದೆ. ವಿಜಯನಗರ ಆರು ತಾಲೂಕುಗಳ ಹೊಸ ಜಿಲ್ಲೆಯಾಗಿ ಇಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಇಂದು ಸಂಜೆ 6 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 2, 3ರಂದು ಹೊಸಪೇಟೆಯಲ್ಲಿ 2 ದಿನ ವಿಜಯನಗರ ಉತ್ಸವ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೆಲ ಸಚಿವರು ಸೇರಿದಂತೆ ಭಾಗಿಯಾಗಲಿದ್ದಾರೆ. ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧಗೊಂಡಿದೆ. ಎರಡು ದಿನವೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜ್ಯ, ಹೊರ ರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ವಿಜಯನಗರ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಎಲ್ಈಡಿ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.