ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿಹೊಡೆದ ಕಾರಣ ಅದರಲ್ಲಿದ್ದ ಎಎಸ್ಐ ಹಾಗೂ ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಸಚಿವರು ಬೆಂಗಳೂರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ ನಂತರ ಅವರು ಪ್ರಯಾಣ ಮುಂದುವರಿಸಿದ್ದಾರೆ.
ವಿಜಯನಗರ, ಜೂನ್ 18: ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಸಚಿವರು ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅವರ ಬೆಂಗಾವಲು ಪಡೆ ವಾಹನ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹೆದ್ದಾರಿ ಗಸ್ತು ವಾಹನದಲ್ಲಿದ್ದ ಎಎಸ್ಐ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಗಾಯವಾಗಿದೆ. ತಕ್ಷಣವೇ ಅವರನ್ನು ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ವಿಚಾರಿಸಿದ ನಂತರ ಸಚಿವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos