Bone Fracture: ಸ್ಪರ್ಧಾಳು ಪಕ್ಕದಲ್ಲಿ ನಿಂತಿದ್ದವನ ಕಾಲಿನ ಮೇಲೆ ಜಾರಿಬಿತ್ತು 175 ಕೆಜಿ ತೂಕದ ಗುಂಡುಕಲ್ಲು! ಮುರಿದ ಕಾಲು ಮೂಳೆ

Edited By: ಸಾಧು ಶ್ರೀನಾಥ್​

Updated on: Sep 07, 2023 | 9:40 AM

ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ. ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ.

ವಿಜಯಪುರ, ಸೆಪ್ಟೆಂಬರ್​ 7: ಗುಂಡು ಕಲ್ಲು ಎತ್ತುವ ಸ್ಪರ್ಧೆ (Rock Lifting) ವೇಳೆ ಅವಘಡ ಸಂಭವಿಸಿದೆ. ಗುಂಡು ಕಲ್ಲು ಎತ್ತುವ ಸ್ಪರ್ಧಾಳು (Competitor) ಜೊತೆಗಿದ್ದವನ ಕಾಲಿನ ಮೇಲೆ 175 ಕೆಜಿ ತೂಕದ ಗುಂಡು ಕಲ್ಲು ಜಾರಿ ಬಿದ್ದಿದೆ. ವಿಜಯಪುರ ಜಿಲ್ಲೆ (Vijayapura) ಬಸವನಬಾಗೇವಾಡಿ ಪಟ್ಟಣದಲ್ಲಿ ನಿನ್ನೆ ಬುಧವಾರ ಘಟನೆ ಬೆಳಕಿಗೆ ಬಂದಿದೆ. ಮೂಲ ನಂದೀಶ್ವರ ದೇವಸ್ಥಾನ ಜಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುಂಡು ಕಲ್ಲು ಹಾಗೂ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಶಿವನಗೌಡ ಪಾಟೀಲ್ ಕಾಲಿನ ಮೇಲೆ ಗುಂಡು ಕಲ್ಲು ಬಿದ್ದಿದೆ.

ಪೈಲ್ವಾನ್ ಚಂದ್ರಶೇಖರ್ ಯಾಳವಾರ್ 175 ಕೆ.ಜಿ ಗುಂಡು ಕಲ್ಲು ಎತ್ತುತ್ತಿದ್ದರು. ಗುಂಡು ಕಲ್ಲು ಕೆಳಗಿಳಿಸೋ ವೇಳೆ ಅವಘಡ ನಡೆದಿದೆ. ಶಿವನಗೌಡ ಕಾಲು ಮೂಳೆ ಮುರಿದಿದ್ದು (Bone Fracture), ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ಸ್ಥಳೀಯರು ಮೂಳೆ ಮುರಿದುಕೊಂಡು ಒದ್ದಲಾಡುತ್ತಿದ್ದ ಶಿವನಗೌಡ ನೆರವಿಗೆ ಧಾವಿಸಿ, ಆಸ್ಪತ್ರೆಗೆ  ಸೇರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More