AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ವಿಮಾನ ನಿಲ್ದಾಣದ ಜೊತೆಗೆ ಪೈಲಟ್ ಟ್ರೈನಿಂಗ್ ಸೆಂಟರ್ ಆರಂಭಕ್ಕೆ ಪ್ಲಾನ್

ವಿಜಯಪುರ: ವಿಮಾನ ನಿಲ್ದಾಣದ ಜೊತೆಗೆ ಪೈಲಟ್ ಟ್ರೈನಿಂಗ್ ಸೆಂಟರ್ ಆರಂಭಕ್ಕೆ ಪ್ಲಾನ್

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 31, 2026 | 3:51 PM

Share

ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆ ಹಂತಕ್ಕೆ ಬಂದಿದ್ದು, ಸುಪ್ರೀಂಕೋರ್ಟ್‌ನ ತಡೆಯಾಜ್ಞೆಯನ್ನೂ ನಿವಾರಿಸಲಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದ ಖ್ಯಾತ ಕಾರ್ವರ್ ಏವಿಯೇಷನ್ ಸಂಸ್ಥೆಯು ಇಲ್ಲಿ ಪೈಲಟ್ ತರಬೇತಿ ಶಾಲೆ ಆರಂಭಿಸಲು ಆಸಕ್ತಿ ತೋರಿದೆ. ಇದು ಉತ್ತರ ಕರ್ನಾಟಕದ ಯುವಕರಿಗೆ ಪೈಲಟ್ ಆಗುವ ಕನಸನ್ನು ನನಸು ಮಾಡಲು ಸ್ಥಳೀಯ ಅವಕಾಶಗಳನ್ನು ಸೃಷ್ಟಿಸಲಿದೆ.

ವಿಜಯಪುರ: ಉತ್ತರ ಕರ್ನಾಟಕದ ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆ ಕೊನೆಗೂ ಸನ್ನಿಹಿತವಾಗಿದ್ದು, ಇದರ ಬೆನ್ನಲ್ಲೇ ಜಿಲ್ಲೆಗೆ ಮತ್ತೊಂದು ಬೃಹತ್ ಕೊಡುಗೆ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಸುಮಾರು 618.75 ಕೋಟಿ ರೂಪಾಯಿ ವೆಚ್ಚದಲ್ಲಿ ರನ್‌ವೇ, ಟ್ಯಾಕ್ಸಿ ವೇ, ಏಪ್ರಾನ್ ಹಾಗೂ ಪ್ರಯಾಣಿಕರ ಅಧುನಿಕ ಟರ್ಮಿನಲ್ ಸೇರಿದಂತೆ ಪ್ರಮುಖ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಈಗ ಈ ವಿಮಾನ ನಿಲ್ದಾಣದಲ್ಲಿ ಪೈಲಟ್ ತರಬೇತಿ ಶಾಲೆ (Pilot Training School) ಆರಂಭಿಸಲು ಗಂಭೀರ ಚಿಂತನೆ ನಡೆದಿದೆ. ಮಹಾರಾಷ್ಟ್ರದ ಬಾರಾಮತಿ ಮೂಲದ ಖ್ಯಾತ ‘ಕಾರ್ವರ್ ಏವಿಯೇಷನ್’ ಸಂಸ್ಥೆಯ ಅಧಿಕಾರಿಗಳು ಇತ್ತೀಚೆಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲ್ಲಿನ ವಾತಾವರಣ ಹಾಗೂ ಮೂಲಸೌಕರ್ಯಗಳು ತರಬೇತಿ ಕೇಂದ್ರಕ್ಕೆ ಪೂರಕವಾಗಿವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಯೋಜನೆಗೆ ಅಂತಿಮ ಮುದ್ರೆ ಬಿದ್ದರೆ, ವಿಜಯಪುರ ಹಾಗೂ ಸುತ್ತಮುತ್ತಲ ಭಾಗದ ಯುವಜನರು ಸ್ಥಳೀಯವಾಗಿಯೇ ಪೈಲಟ್ ತರಬೇತಿ ಪಡೆದು ಗಗನಕ್ಕೇರುವ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Oct 31, 2026 03:50 PM

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More