ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

Edited By:

Updated on: Feb 19, 2026 | 9:27 PM

ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ ಬಬಲಾದಿ ಸ್ವಾಮೀಜಿಯು ಭವಿಷ್ಯ ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು. ರೋಗ, ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಎಚ್ಚರಿಕೆಯ ಜೊತೆಗೆ, ರೈತರಿಗೆ ಹಾಗೂ ದೇಶದ ಆರ್ಥಿಕತೆಗೆ ಲಾಭವಾಗುವ ಮಾತುಗಳು ಕೂಡ ಹೇಳಿದ್ದಾರೆ.

ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು. ರೋಗ, ಯುದ್ಧ ಮತ್ತು ಪ್ರಕೃತಿ ವಿಕೋಪಗಳ ಎಚ್ಚರಿಕೆಯ ಜೊತೆಗೆ, ರೈತರಿಗೆ ಹಾಗೂ ದೇಶದ ಆರ್ಥಿಕತೆಗೆ ಲಾಭವಾಗುವ ಮಾತುಗಳು ಕೂಡ ಹೇಳಿದ್ದಾರೆ.

ರಾಜಕೀಯ ಮತ್ತು ರಕ್ಷಣಾ ವಲಯದ ಬಗ್ಗೆಯೂ ಸದಾಶಿವ ಮುತ್ತಜ್ಜ ಮಹತ್ವದ ಸೂಚನೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಹೊಸ ತಿರುವುಗಳು ಉಂಟಾಗಲಿವೆ ಎಂದಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ನಡೆಯುತ್ತಿರುವ ಕುರ್ಚಿ ಫೈಟ್‌ ತಾರ್ಕಿಕ ಅಂತ್ಯ ಕಾಣಲಿದ್ಯಾ ಎನ್ನುವ ಚರ್ಚೆ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More