ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ
ವಿಜಯಪುರದ ಕನ್ನೊಳ್ಳಿ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ಪುತ್ರ ಸಮರ್ಥ ಗೌಡ ಪಾಟೀಲ್ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಟೋಲ್ ಶುಲ್ಕ ಕೇಳಿದ್ದಕ್ಕೆ 'ನಾನು ವಿಜುಗೌಡ ಪುತ್ರ' ಎಂದು ಹೇಳಿದಾಗ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಸಮರ್ಥ ಗೌಡ ಸಿಬ್ಬಂದಿಯನ್ನು ಥಳಿಸಿದ್ದಾರೆ.
ವಿಜಯಪುರ, ಅಕ್ಟೋಬರ್ 30: ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ (Vijugouda Patil) ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ನಡೆದಿದೆ. ಪುತ್ರ ಸಮರ್ಥ ಗೌಡ ವಿಜಯಪುರದಿಂದ ಬ್ಲ್ಯಾಕ್ ಕಲರ್ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಯಾವ ವಿಜುಗೌಡ ಅಂತಾ ಸಂಗಪ್ಪ ಕೇಳಿದ್ದಕ್ಕೆ ಥಳಿಸಿರುವ ಆರೋಪ ಮಾಡಲಾಗಿದೆ. ಸದ್ಯ ಹಲ್ಲೆಗೊಳಗಾದ ಸಂಗಪ್ಪಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಮರ್ಥ ಗೌಡ ವಿರುದ್ಧ ಸಿಬ್ಬಂದಿ ದೂರು ದಾಖಲಿಸಲು ಠಾಣೆಗೆ ತೆರಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
