ತಲ್ವಾರ್​ನಿಂದ ಬರ್ತಡೇ ಕೇಕ್ ಕತ್ತರಿಸಿದ ಯುವಕ: ಸಾಥ್ ನೀಡಿದ ರೌಡಿ ಶೀಟರ್

Edited By:

Updated on: Jan 15, 2024 | 9:48 PM

ಯುವಕನೋರ್ವ ತನ್ನ ಜನ್ಮದಿನದ ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.

ವಿಜಯಪುರ, ಜನವರಿ 15: ಯುವಕನೋರ್ವ ತನ್ನ ಜನ್ಮದಿನದ ಕೇಕ್​ನ್ನು ತಲ್ವಾರ್​ (Talwar)ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಅಮನ್ ಲೋಣಿ ಹಾಗೂ ರೌಡಿ ಶೀಟರ್​ನ್ನು ಠಾಣೆಗೆ ಕರೆಸಿದ ಗೋಲಗುಂಬಜ್ ಪೊಲೀಸರು ವಿಚಾರಣೆ ಮಾಡಿದ್ದಾರೆ. ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ‌ ವ್ಯಾಪ್ತಿ ಘಟನೆ ನಡಿದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More