AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ದೇವರಹಿಪ್ಪರಗಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ವಿಜಯಪುರದ ದೇವರಹಿಪ್ಪರಗಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 08, 2026 | 1:32 PM

Share

ವಿಜಯಪುರದ ದೇವರಹಿಪ್ಪರಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕಲ್ಲೇ ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆ ನೀಡಿದ್ದಾರೆ. 8.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಜನರೇಟರ್ ಇದ್ದರೂ ಡೀಸೆಲ್ ಇಲ್ಲದ ಕಾರಣ ಕಾರ್ಯನಿರ್ವಹಿಸಲಿಲ್ಲ. ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ವಿಜಯಪುರ, ಅ.8: ಜಿಲ್ಲೆಯ ದೇವರಹಿಪ್ಪರಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕನ್ನೇ ಆಶ್ರಯಿಸಿ ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯನ್ನ ಎತ್ತಿ ತೋರಿಸಿದೆ. ಕಳೆದ ಎರಡು ದಿನಗಳ ಹಿಂದೆ ಇಂಡಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ದೇವರಹಿಪ್ಪರಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ. ಜನರೇಟರ್ ಇದ್ದರೂ, ಡೀಸೆಲ್ ಕೊರತೆಯಿಂದಾಗಿ ಅದು ಕಾರ್ಯನಿರ್ವಹಿಸಿಲ್ಲ. ವೈದ್ಯರು ಮತ್ತು ಶುಶ್ರೂಷಕರು ಸ್ಥಳೀಯರ ಸಹಾಯದೊಂದಿಗೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು. ಸುಮಾರು 8.30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂತಹ ಪರಿಸ್ಥಿತಿ ಉಂಟಾಗಿರುವುದು ಆಶ್ಚರ್ಯಕರ. ವಿದ್ಯುತ್ ವ್ಯವಸ್ಥೆಯನ್ನ ಸುಧಾರಿಸಲು ಮತ್ತು ಮೂಲ ಸೌಕರ್ಯಗಳನ್ನ ಒದಗಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More