ವಿಜಯಪುರ: ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್ಗೆ ಸೇರಿದ್ದು; ಎಂ ಬಿ ಪಾಟೀಲ್
Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್ಗೆ ಸೇರಿದ್ದು ಎಂಬ ವಂದತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ವಿಜಯಪುರ, ಅಕ್ಟೋಬರ್ 27: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್ಗೆ (Waqf Raw) ಸೇರಿದೆ ಎಂಬ ವಂದತಿ ಸುಳ್ಳು ಸುದ್ದಿಯಾಗಿದೆ. ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಕ್ಫ್ ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.
ಹೊನವಾಡ ಗ್ರಾಮದ ಜಮೀನಿನಗಳು 1974ರಲ್ಲಿ ವಕ್ಫ್ ಗೆಜೆಟ್ನಲ್ಲಿ ತಪ್ಪಾಗಿ ನಮೂದಿಸಲಾಗಿದೆ. 1977ರಲ್ಲಿ ಈ ತಪ್ಪನ್ನು ವಕ್ಫ್ ಮಂಡಳಿ ಸರಿಪಡಿಸಿದೆ. ಹೊನವಾಡ ಗ್ರಾಮದ 10 ರಿಂದ 11 ಎಕರೆ ಮಾತ್ರ ವಕ್ಫ್ಗೆ ಸೇರಿದೆ. ಉಳಿದ ಜಮೀನು ಹೊನವಾಡ ಗ್ರಾಮದ ರೈತರಿಗೆ ಸೇರಿದೆ. ಗೆಜೆಟ್ ನೋಟಿಫಿಕೇಷನ್ನಿಂದ ಗೊಂದಲ ಸೃಷ್ಟಿಯಾಗಿದೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.
ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು: ಕಂಗಾಲಾದ ಅನ್ನದಾತ
ಸೃಷ್ಟಿಯಾಗಿರುವ ಗೊಂದಲ ನಿವಾರಣೆಗೆ ಇಂದು (ಅ.26) ವಕ್ಫ್ ಹಾಗೂ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಬಳಿಕ ಎಲ್ಲ ಮಾಹಿತಿ ನೀಡುವೆ ಎಂದು ಹೇಳಿದರು.
ಏನಿದು ವಿವಾದ
ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿನ 1200 ಎಕರೆ ಜಮೀನು ಶಾ ಅಮೀನುದ್ದೀನ್ ದರ್ಗಾಕ್ಕೆ ಸೇರಿದ್ದು ಎಂದು ತಹಶೀಲ್ದಾರ್ ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ ನಮ್ಮ ಗ್ರಾಮದಲ್ಲಿ ಶಾ ಅಮೀನುದ್ದೀನ್ ದರ್ಗಾ ಇಲ್ಲ ಎಂದು ರೈತರು ಹೇಳುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ