ವಿಜಯಪುರ: ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್​ಗೆ ಸೇರಿದ್ದು; ಎಂ ಬಿ ಪಾಟೀಲ್​

Edited By: ವಿವೇಕ ಬಿರಾದಾರ

Updated on: Oct 27, 2024 | 12:01 PM

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್​ಗೆ ಸೇರಿದ್ದು ಎಂಬ ವಂದತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್​ ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ, ಅಕ್ಟೋಬರ್​ 27: ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್​​ಗೆ (Waqf Raw) ಸೇರಿದೆ ಎಂಬ ವಂದತಿ ಸುಳ್ಳು ಸುದ್ದಿಯಾಗಿದೆ. ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಕ್ಫ್​ ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಹೊನವಾಡ ಗ್ರಾಮದ ಜಮೀನಿನಗಳು 1974ರಲ್ಲಿ ವಕ್ಫ್​​​ ಗೆಜೆಟ್​​​ನಲ್ಲಿ ತಪ್ಪಾಗಿ ನಮೂದಿಸಲಾಗಿದೆ. 1977ರಲ್ಲಿ ಈ ತಪ್ಪನ್ನು ವಕ್ಫ್ ಮಂಡಳಿ ಸರಿಪಡಿಸಿದೆ. ಹೊನವಾಡ ಗ್ರಾಮದ 10 ರಿಂದ 11 ಎಕರೆ ಮಾತ್ರ ವಕ್ಫ್​ಗೆ ಸೇರಿದೆ. ಉಳಿದ ಜಮೀನು ಹೊನವಾಡ ಗ್ರಾಮದ ರೈತರಿಗೆ ಸೇರಿದೆ. ಗೆಜೆಟ್​​ ನೋಟಿಫಿಕೇಷನ್​​ನಿಂದ ಗೊಂದಲ ಸೃಷ್ಟಿಯಾಗಿದೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್​ ಹೆಸರು: ಕಂಗಾಲಾದ ಅನ್ನದಾತ

ಸೃಷ್ಟಿಯಾಗಿರುವ ಗೊಂದಲ ನಿವಾರಣೆಗೆ ಇಂದು (ಅ.26) ವಕ್ಫ್​ ಹಾಗೂ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಬಳಿಕ ಎಲ್ಲ ಮಾಹಿತಿ ನೀಡುವೆ ಎಂದು ಹೇಳಿದರು.

ಏನಿದು ವಿವಾದ

ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿನ 1200 ಎಕರೆ ಜಮೀನು ಶಾ ಅಮೀನುದ್ದೀನ್ ದರ್ಗಾಕ್ಕೆ ಸೇರಿದ್ದು ಎಂದು ತಹಶೀಲ್ದಾರ್​​ ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ ನಮ್ಮ ಗ್ರಾಮದಲ್ಲಿ ಶಾ ಅಮೀನುದ್ದೀನ್ ದರ್ಗಾ ಇಲ್ಲ ಎಂದು ರೈತರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More