ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಸಂಗತಿ ಪತ್ತೆ

Edited By:

Updated on: Sep 04, 2026 | 3:34 PM

ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

ಗದಗ, (ಸೆಪ್ಟೆಂಬರ್ 04): ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೂವತ್ತಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಗದಗದಲ್ಲಿ ಬಂಧಿಸಲಾಗಿದೆ. ವಿಜಯಪುರ ಮೂಲದ ಈರಣ್ಣ ಬಡಿಗೇರ್ ಇನ್‌ಸ್ಟಾಗ್ರಾಂ ಮೂಲಕ ವಂಚನೆ ಎಸಗಿದ್ದು, ಆತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ. ವಿಜಯಪುರ ಮೂಲದ ಡಿಪ್ಲೋಮಾ ವಿದ್ಯಾರ್ಥಿ ಈರಣ್ಣ ಬಡಿಗೇರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ಮೋಸ ಹೋದ ಯುವಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More