ವಿಜಯಪುರ: ಲಕ್ಷ್ಮೀ ಪೂಜೆ ಬಳಿಕ‌ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ: ವಿಡಿಯೋ ವೈರಲ್​

Edited By:

Updated on: Nov 13, 2023 | 7:13 PM

Vijayapura News: ಲಕ್ಷ್ಮೀ ಪೂಜೆ ಬಳಿಕ‌ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡುಹಾರಿಸಿದ ವ್ಯಕ್ತಿ. ಲೈಸೆನ್ಸ್‌ ಹೊಂದಿದ್ದ ಪಿಸ್ತೂಲ್‌ನಿಂದ ಒಂದು ಸುತ್ತು ಫೈರಿಂಗ್​ ಮಾಡಲಾಗಿದೆ. ಫೈರಿಂಗ್‌ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

ವಿಜಯಪುರ, ನವೆಂಬರ್​​​ 13: ಲಕ್ಷ್ಮೀ ಪೂಜೆ (Lakshmi Puja) ಬಳಿಕ‌ ವ್ಯಕ್ತಿ ಗಾಳಿಯಲ್ಲಿ ಗುಂಡು (FIRING) ಹಾರಿಸಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಸಿದ್ದರಾಯ ಆಡಿನ ಗಾಳಿಯಲ್ಲಿ ಗುಂಡುಹಾರಿಸಿದ ವ್ಯಕ್ತಿ. ಲೈಸೆನ್ಸ್‌ ಹೊಂದಿದ್ದ ಪಿಸ್ತೂಲ್‌ನಿಂದ ಒಂದು ಸುತ್ತು ಫೈರಿಂಗ್​ ಮಾಡಲಾಗಿದೆ. ಫೈರಿಂಗ್‌ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಸಿದ್ದರಾಯ ವಿರುದ್ಧ ಕಾನೂನು ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿಯವರು ಮೂಲತಃ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದವರು. ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದು ಇವರ ಕೆಲಸದ ಮಾಹಿತಿಯಾಗಿದೆ. ಪ್ರಾಥಮಿಕ ಶಿಕ್ಷಣ ನಂತರ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡವೇ ಇವರ ವಿದ್ಯಾ ಕ್ಷೇತ್ರವಾಗಿದೆ . ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ್ದಾರೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ, ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದಾರೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ, ಆಸಕ್ತಿ ಇವರಗಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ.

Read More