AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಮಭಕ್ತರು

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಮಭಕ್ತರು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Dec 28, 2023 | 11:12 AM

Share

ವಿಜಯಪುರದಲ್ಲಿ ಇಂದು ಅಯೋಧ್ಯೆಯ ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಜಯಪುರ, ಡಿಸೆಂಬರ್​ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ (Basangouda Patil Yatnal)​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್​ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.‘

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 22, 2023 08:13 PM

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More