AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ

ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 02, 2026 | 2:44 PM

Share

ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್​ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಇದ್ದಾಗ ಹಿಂದೂಗಳ ರಕ್ಷಣೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ವಿಜಯಪುರ, (ಏಪ್ರಿಲ್ 02): ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎರಡು ರಾಷ್ಟ್ರೀಯ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ. ಬೇಸಿಗೆಯ ಬಿರು ಬಿಸಿಲು ಲೆಕ್ಕಿಸಿದೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮತಬೇಟೆ ನಡೆಸಿದ್ದಾರೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್​ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಇದ್ದಾಗ ಹಿಂದೂಗಳ ರಕ್ಷಣೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More