ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ
ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಇದ್ದಾಗ ಹಿಂದೂಗಳ ರಕ್ಷಣೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ವಿಜಯಪುರ, (ಏಪ್ರಿಲ್ 02): ಕಾಂಗ್ರೆಸ್ನ ಎಚ್ವೈ ಮೇಟಿ ನಿಧನದಿಂದ ತರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎರಡು ರಾಷ್ಟ್ರೀಯ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ. ಬೇಸಿಗೆಯ ಬಿರು ಬಿಸಿಲು ಲೆಕ್ಕಿಸಿದೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮತಬೇಟೆ ನಡೆಸಿದ್ದಾರೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಇದ್ದಾಗ ಹಿಂದೂಗಳ ರಕ್ಷಣೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
