ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಎರಡೂ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ

Edited By:

Updated on: Apr 14, 2026 | 2:37 PM

ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠಗಳ ಟ್ರಸ್ಟ್​ ನಂಬಿಕೆ ಕಳೆದುಕೊಂಡಿದೆ. ಪ್ರಾಮಾಣಿಕವಾಗಿ ಸಮುದಾಯಕ್ಕಾಗಿ ಕೆಲಸ ಮಾಡುವವರು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ, (ಏಪ್ರಿಲ್ 14): ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠಗಳ ಟ್ರಸ್ಟ್​ ನಂಬಿಕೆ ಕಳೆದುಕೊಂಡಿದೆ. ಪ್ರಾಮಾಣಿಕವಾಗಿ ಸಮುದಾಯಕ್ಕಾಗಿ ಕೆಲಸ ಮಾಡುವವರು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿಂದು ಮಾಧ್ಯಮಗಳಿಗೆ ಮಾತನಾಡಿದ ಯತ್ನಾಳ್, ಟ್ರಸ್ಟ್​ಗಳು ಸರ್ಕಾರವನ್ನು ಬ್ಲ್ಯಾಕ್​ಮೇಲ್​ ಮಾಡುವುದಕ್ಕೆ ಇವೆ. ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಿದ್ದಾಗ 11 ಕೋಟಿ ರೂ. ಕೊಟ್ಟಿದ್ದರು. ಆದರೆ ಹಣಕಾಸಿನ ದಾಖಲೆಗಳು ನಕಲಿಯಾಗಿವೆ. 2 ಟ್ರಸ್ಟ್​ಗಳ ಮೇಲೆ ಜನರು ನಂಬಿಕೆ ವಿಶ್ವಾಸ ಕಳೆದುಕೊಂಡಿದ್ದಾರೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರ ಅಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲು ನನಗೆ ಅವಕಾಶ ನೀಡಲಿಲ್ಲ. ನಮ್ಮದೇ ಸರ್ಕಾರ ಇದ್ದರೂ ಮಾತನಾಡಲು ಅವಕಾಶ ನೀಡಲಿಲ್ಲ. ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಇದ್ದಾಗ ಹಣ ನೀಡಲಾಗಿತ್ತು. ಇವರ ಮನೆ ಬೆಕ್ಕು, ನಾಯಿ ಇವರ ಮಾತು ಕೇಳಲ್ಲ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More