ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2023 | 9:21 PM

ಸರಿಯಾದ ಸಮಯಕ್ಕೆ ವಿದ್ಯುತ್‌ ನೀಡದ್ದಕ್ಕೆ ರೈತರು ಆಕ್ರೋಶಗೊಂಡಿದ್ದು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ ತಂದು ಬಿಟ್ಟಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ. ಪ್ರತಿದಿನ ತಡರಾತ್ರಿ ಕರೆಂಟ್ ನೀಡುತ್ತಾರೆ. ಕತ್ತಲೆಯಲ್ಲಿ ಜಮೀನುಗಳಿಗೆ ಹೋಗಿ ನೀರುಣಿಸುವುದು ಹೇಗೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲಿ ಎಂದು ಮೊಸಳೆ ತಂದಿರುವುದಾಗಿ ಹೇಳಿದ್ದಾರೆ.

ವಿಜಯಪುರ, ಅಕ್ಟೋಬರ್​​​ 19: ಸರಿಯಾದ ಸಮಯಕ್ಕೆ ವಿದ್ಯುತ್‌ ನೀಡದ್ದಕ್ಕೆ ರೈತರು ಆಕ್ರೋಶಗೊಂಡಿದ್ದು, ವಿದ್ಯುತ್ ವಿತರಣಾ ಘಟಕದ ಆವರಣಕ್ಕೆ ಮೊಸಳೆ (crocodile) ತಂದು ಬಿಟ್ಟಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ್ ಗ್ರಾಮದಲ್ಲಿ ನಡೆದಿದೆ. ಪ್ರತಿದಿನ ತಡರಾತ್ರಿ ಕರೆಂಟ್ ನೀಡುತ್ತಾರೆ. ಕತ್ತಲೆಯಲ್ಲಿ ಜಮೀನುಗಳಿಗೆ ಹೋಗಿ ನೀರುಣಿಸುವುದು ಹೇಗೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕತ್ತಲೆಯಲ್ಲಿ ಜಲಚರ ಪ್ರಾಣಿಗಳಿಂದ ತೊಂದರೆ ಇದೆ ಎಂದರೂ ಸಹ ಅಧಿಕಾರಿಗಳು ಕೇಳುತ್ತಿಲ್ಲ. ರಾತ್ರಿ ವೇಳೆ ಕರೆಂಟ್ ನೀಡಿದರೆ ನಾವೇನು ಮಾಡುವುದು. ನಮ್ಮ ಸಮಸ್ಯೆ ಅಧಿಕಾರಿಗಳಿಗೆ ಅರ್ಥವಾಗಲಿ ಎಂದು ಮೊಸಳೆಯನ್ನ ತಂದಿದ್ದೇವೆ ಎಂದು ರೈತರು ಹೇಳಿದ್ದಾರೆ. ನಿನ್ನೆ ರಾತ್ರಿ ಪಾಳಿಯಲ್ಲಿ ನೀರು ಉಣಿಸುವಾಗ ಜಮೀನಿನಲ್ಲಿ ಕಾಣಿಸಿಕೊಂಡ ಮೊಸಳೆಯನ್ನೇ ಹಿಡಿದು ಟ್ರ್ಯಾಕ್ಟರ್ ಮೂಲಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ತಂದಿದ್ದು, ಕೊನೆಗೆ ರೈತರ ಮನವೋಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ‌ ತೆಗೆದುಕೊಂಡ ಹೋಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 19, 2023 09:20 PM