Video: ಅನ್ಯಕೋಮಿನ ಅಪ್ರಾಪ್ತ ಬಾಲಕನಿಂದ ದೇವಿ ಮೂರ್ತಿಗೆ ಅವಮಾನ: ಗ್ರಾಮಸ್ಥರಿಂದ ಥಳಿತ

Edited By:

Updated on: Oct 25, 2023 | 3:48 PM

Vijayapura News: ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ನಿನ್ನೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ, ಅಕ್ಟೋಬರ್​​​ 25: ನಾಡಹಬ್ಬ ದಸರಾ (Dasara) ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ನಿನ್ನೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಶ್ರೀ ಅಂಬಾ ಭವಾನಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ಬಳಿಕ ಕೊಠಡಿಯಲ್ಲಿದ್ದ ದೇವಿಯ ಮೂರ್ತಿಗೆ ತೊಡಿಸಿದ್ದ ಸೀರೆಯನ್ನು ತೆಗೆದು ಅವಮಾನಿಸಲಾಗಿದೆ. ಇದನ್ನು ಕಂಡ ಸ್ಥಳಯರಿಂದ ಅಪ್ರಾಪ್ತ ಬಾಲನಿಗೆ ಧರ್ಮದೇಟು ನೀಡಿದ್ದಾರೆ. ಸದ್ಯ ಯುವಕನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದು, ಕಾನೂನು ಪ್ರಕಾರ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ಪರಸ್ಥಿತಿ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More