ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​

Edited By:

Updated on: Jan 27, 2026 | 6:20 PM

ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಪೊಲೀಸ್​​ ತನಿಖೆವೇಳೆ ಅಚ್ಚರಿಯ ವಿಷಯವೊಂದು ಬಯಲಾಗಿದೆ. ಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಭೂಮಿಕಾ ಜ್ಯುವೆಲರಿ ಶಾಪ್ ದಾಟಿ ಬೇರೆ ಬಂಗಾರದ ಅಂಗಡಿಗಳತ್ತ ಮೊದಲು ಹೋಗಿದ್ದರು. ಬಳಿಕ ಹಿಂದಿರುಗಿ ಬಂದು ಗನ್​​ ತೋರಿಸಿ ಭೂಮಿಕಾ ಜ್ಯುವೆಲರಿ ಶಾಪ್​​ನಲ್ಲಿ ದರೋಡೆ ನಡೆಸಿದ್ದಾರೆ ಎನ್ನಲಾಗಿದೆ.

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ ಬಳಿಯ ರಸ್ತೆಯಿಂದ ಗ್ರಾಮದ ಮಧ್ಯ ಭಾಗದಲ್ಲಿರುವ ಜ್ಯುವೆಲರಿ ಶಾಪ್​​ಗಳತ್ತ ಚಿತ್ತನೆಟ್ಟಿದ್ದರು. ಭೂಮಿಕಾ ಜ್ಯುವೆಲರಿ ಶಾಪ್ ದಾಟಿ ಬೇರೆ ಬಂಗಾರದ ಅಂಗಡಿಗಳತ್ತ ಮೊದಲು ಹೋಗಿದ್ದರು. ಬಳಿಕ ಹಿಂದಿರುಗಿ ಬಂದು ಗನ್​​ ತೋರಿಸಿ ಭೂಮಿಕಾ ಜ್ಯುವೆಲರಿ ಶಾಪ್​​ನಲ್ಲಿ ದರೋಡೆ ನಡೆಸಿದ್ದಾರೆ ಎನ್ನಲಾಗಿದೆ. ಬಂದ ಮಾರ್ಗದ ಮೂಲಕವೇ ಆರೋಪಿಗಳು ಎಸ್ಕೇಪ್​​ ಆಗಿದ್ದು, ದರೋಡೆಕೋರರ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More