ವಿಜಯಪುರದ ಮತದಾರ ಪ್ರಜ್ಞಾವಂತ ಮತ್ತು ಪ್ರಬುದ್ಧ, ಲೋಕಸಭೆಗೆ ಯಾರನ್ನು ಕಳಿಸಬೇಕೆಂದು ತಿಳಿದಿದ್ದಾನೆ: ಬಸನಗೌಡ ಯತ್ನಾಳ್

ವಿಜಯಪುರದ ಮತದಾರ ಪ್ರಜ್ಞಾವಂತ ಮತ್ತು ಪ್ರಬುದ್ಧ, ಲೋಕಸಭೆಗೆ ಯಾರನ್ನು ಕಳಿಸಬೇಕೆಂದು ತಿಳಿದಿದ್ದಾನೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 16, 2024 | 4:19 PM

ಭಾರತ ಅಭಿವೃದ್ಧಿ ಪಥದಲ್ಲಿ ಮುಂದುವರಿಯಬೇಕು, ಒಂದು ಸುಭದ್ರ ಮತ್ತು ಬಲಿಷ್ಠ ರಾಷ್ಟವಾಗಬೇಕು ಮತ್ತು ಮುಂದಿನ 5 ವರ್ಷಗಳಲ್ಲಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಎಕಾನಮಿಯಾಗಬೇಕಾದರೆ ಅದು ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಅನ್ನೋದನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ, ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ವಿಜಯಪುರ: ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದಿಂದ ( Vijayapura Lok Sabha constituency) ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಪ್ರತಿ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಅಂತರ ಹೆಚ್ಚುತ್ತಾ ಸಾಗಿದೆ, ಹಾಗಾಗಿ ಈ ಬಾರಿ 2 ಲಕ್ಷಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಜಿಗಜಿಣಗಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. 1996ರಲ್ಲಿ ಸೋತ ಬಳಿಕ ತಾನು ಎರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿರುವುದಾಗಿ ತಿಳಿಸಿದ ಯತ್ನಾಳ್ ಅಲ್ಲಿಂದೀಚೆಗೆ ಜಿಜಜಿಣಗಿ ನಿರಂತರವಾಗಿ ಗೆಲ್ಲುತ್ತಿದ್ದಾರೆ. ವಿಜಯಪುರದ ಮತದಾರರು ಪ್ರಜ್ಞಾವಂತರು ಮತ್ತು ಪ್ರಬುದ್ಧರು; ಲೋಕಸಭೆ, ವಿಧಾನಸಭೆ ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಯಾರನ್ನು ಆರಿಸಬೇಕು ಅಂತ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದರು. ಹಾಗೆಯೇ, ಭಾರತ ಅಭಿವೃದ್ಧಿ ಪಥದಲ್ಲಿ ಮುಂದುವರಿಯಬೇಕು, ಒಂದು ಸುಭದ್ರ ಮತ್ತು ಬಲಿಷ್ಠ ರಾಷ್ಟವಾಗಬೇಕು ಮತ್ತು ಮುಂದಿನ 5 ವರ್ಷಗಳಲ್ಲಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಎಕಾನಮಿಯಾಗಬೇಕಾದರೆ ಅದು ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಅನ್ನೋದನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ, ಹಾಗಾಗಿ ವಿಜಯಪುರ ಜನ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ದೂರು; ಕಾರಣ ಇಲ್ಲಿದೆ