“ನಾವೇನು ಪಾಪ ಮಾಡಿದ್ದೀವಿ?”: ಗಡಿಭಾಗದ ಮಹಿಳೆಯರಿಗೆ ಸಿಗದ ‘ಶಕ್ತಿ’ ಭಾಗ್ಯ

Edited By:

Updated on: Nov 09, 2026 | 6:15 PM

ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶವಿದ್ದರೂ, ವಿಜಯಪುರ ಜಿಲ್ಲೆಯ ಗಡಿಭಾಗದ ಮಹಿಳೆಯರು, ವಿಶೇಷವಾಗಿ ಹೊರ್ತಿ, ಝಳಕಿ, ಧೂಳಖೇಡ ಗ್ರಾಮಗಳವರು ತೊಂದರೆಗೊಳಗಾಗಿದ್ದಾರೆ. ವಿಜಯಪುರ-ಸೊಲ್ಲಾಪುರ ಅಂತರರಾಜ್ಯ ಬಸ್‌ಗಳಲ್ಲಿ ಅವರಿಗೆ ಯೋಜನೆ ಅನ್ವಯಿಸುವುದಿಲ್ಲ. ಈ ಮಹಿಳೆಯರು ಯೋಜನೆಯನ್ನು ವಿಸ್ತರಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ವಿಜಯಪುರ, ನ.9: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಆದರೆ, ವಿಜಯಪುರ ಜಿಲ್ಲೆಯ ಗಡಿಭಾಗದ ಮಹಿಳೆಯರಿಗೆ ಈ ಯೋಜನೆ ಲಭ್ಯವಾಗುತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ವಿಜಯಪುರ ಮಹಾರಾಷ್ಟ್ರದ ಗಡಿ ಭಾಗವನ್ನು ಹೊಂದಿಕೊಂಡಿರುವ ಜಿಲ್ಲೆಯಾಗಿದ್ದು, ವಿಜಯಪುರದಿಂದ ಮಹಾರಾಷ್ಟ್ರದ ಸೊಲ್ಲಾಪುರ, ಸಾಂಗ್ಲಿ ಮತ್ತು ಮಿರಜ್ ಕಡೆಗೆ ಸಂಚರಿಸುವ ಅಂತರರಾಜ್ಯ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಂತೆ ಸರ್ಕಾರ ಆದೇಶಿಸಿದೆ. ಇದರ ಪರಿಣಾಮವಾಗಿ, ಹೊರ್ತಿ, ಝಳಕಿ, ಧೂಳಖೇಡ ಸೇರಿದಂತೆ ಹಲವು ಗ್ರಾಮಗಳ ಮಹಿಳೆಯರು ನಿತ್ಯ ಹಣ ಪಾವತಿಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಈ ಭಾಗದ ಮಹಿಳೆಯರು “ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಯಾಗಿದ್ದರೆ ನಾವೇನು ಪಾಪ ಮಾಡಿದ್ದೀವಿ?” ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ತಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಅಂತರರಾಜ್ಯ ಬಸ್‌ಗಳಿಗೂ ಶಕ್ತಿ ಯೋಜನೆಯನ್ನು ವಿಸ್ತರಿಸುವ ಅಥವಾ ಸ್ಥಳೀಯ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡುವಂತೆ ಮಹಿಳೆಯರು ಸರ್ಕಾರ, ಸಾರಿಗೆ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿಯವರು ಮೂಲತಃ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದವರು. ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದು ಇವರ ಕೆಲಸದ ಮಾಹಿತಿಯಾಗಿದೆ. ಪ್ರಾಥಮಿಕ ಶಿಕ್ಷಣ ನಂತರ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡವೇ ಇವರ ವಿದ್ಯಾ ಕ್ಷೇತ್ರವಾಗಿದೆ . ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ್ದಾರೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ, ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದಾರೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ, ಆಸಕ್ತಿ ಇವರಗಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ.

Read More