ಗ್ಯಾರಂಟಿಗಳಿಗೆ ಹಣವಿಲ್ಲದ ಕಾರಣ ಪರಿಷ್ಕರಣೆ ಹೆಸರಲ್ಲಿ ಕತ್ತರಿ: ಬಿ.ವೈ. ವಿಜಯೇಂದ್ರ ಆರೋಪ

Updated on: Jun 17, 2026 | 11:51 AM

ಗ್ಯಾರಂಟಿಗಳಿಗೆ ರಾಜ್ಯ ಸರ್ಕಾರದಿಂದ ಹಣ ಹೊಂದಿಸಲು ಆಗುತ್ತಿಲ್ಲ. ಹೀಗಾಗಿಯೇ ಪರಿಷ್ಕರಣೆ ಹೆಸರಲ್ಲಿ ಅವುಗಳಿಗೆ ಕತ್ತರಿ ಹಾಕುವ ಕೆಲಸ ಮಾಡಲಾಗ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಕ್ಕೆ ಬಡವರಿಗೆ ಮನೆ ನೀಡಲು ಆಗಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಲು ಆಗಿಲ್ಲ. ಹೈನುಗಾರಿಕೆಗೆ ಪ್ರೋತ್ಸಾಹಧನವನ್ನೂ ನಿಲ್ಲಿಸಲಾಗಿದೆ.

ಬೆಂಗಳೂರು, ಜೂನ್​​ 17: ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಹಣ ಕ್ರೋಢೀಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೇ ಸುಧಾರಣೆ ಹೆಸರಿನಲ್ಲಿ ಬಡವರಿಗೆ ನೀಡಲಾಗುವ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ತೆರಿಗೆ ಪಾವತಿದಾರರು ಇದ್ದಾರೆ. ಅವರಿಗ್ಯಾಕೆ ಗ್ಯಾರಂಟಿ ಎಂದು ಪ್ರಶ್ನಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲರಿಗೂ ಉಚಿತ ಎಂದು ಹೇಳಿದವರಿಗೆ ಈಗ ಇವೆಲ್ಲವೂ ನೆನಪಾಗುತ್ತಿದೆಯಾ? ಕೆಲವೆಡೆ ಅಕ್ರಮ ಆಗಿದೆ ಎಂದಾದರೆ ನಿಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳೇನು ಕತ್ತೆ ಕಾಯುತ್ತಿದ್ದರಾ? ಸರ್ಕಾರದಿಂದ ನೂರಾರು ಕೋಟಿ ಸಂಬಳ ಪಡೆದವರು ಏನು ಮಾಡುತ್ತಿದ್ದರು ಎಂದವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More