ವಿಜಯೇಂದ್ರ ಚೆನ್ನಾಗಿ ಕೆಲಸ ಮಾಡುತ್ತಿದ್ದಾನೆ, ಅವನಿಗೆ ಉತ್ತಮ ಭವಿಷ್ಯವಿದೆ ಎಂದರು ಯಡಿಯೂರಪ್ಪ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2022 | 12:57 PM

ಅತ್ಮಸಾಕ್ಷಿ ಬಗ್ಗೆ ಮಾತಾಡುವ ಸಿದ್ದರಾಮಯ್ಯನವರಿಗೆ ಎಲ್ಲಿದೆ ಆತ್ಮಸಾಕ್ಷಿ, ರಾಜಕೀಯ ದೊಂಬರಾಟ ಮಾಡಿಕೊಂಡು ತಿರುಗುತ್ತಿದ್ದಾರೆ ಎಂದು ಅಂತ ಯಡಿಯೂರಪ್ಪ ಹೇಳಿದರು.

Vijayapura:  ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು (BS Yediyurappa), ವಿಜಯೇಂದ್ರ (Vijayendra) ಮುಂದಿನ ಸಿಎಮ್ ಅಭ್ಯರ್ಥಿಯೇ ಅಂತ ಕೇಳಿದ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಅದೆಲ್ಲ ಅವನ ಸ್ನೇಹಿತರು ಹಿತೈಷಿಗಳು ಹೇಳುತ್ತಿರೋದು, ಆದರೆ ಪಕ್ಷಕ್ಕಾಗಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾನೆ, ಅವನಿಗೆ ಉತ್ತಮ ಭವಿಷ್ಯವಿದೆ ಎಂದು ಬಿ ಎಸ್ ವೈ ಹೇಳಿದರು. ಹಾಗೆಯೇ, ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲಿಲಿದ್ದಾರೆ, ಅತ್ಮಸಾಕ್ಷಿ ಬಗ್ಗೆ ಮಾತಾಡುವ ಸಿದ್ದರಾಮಯ್ಯನವರಿಗೆ (Siddaramaiah) ಎಲ್ಲಿದೆ ಆತ್ಮಸಾಕ್ಷಿ, ರಾಜಕೀಯ ದೊಂಬರಾಟ ಮಾಡಿಕೊಂಡು ತಿರುಗುತ್ತಿದ್ದಾರೆ ಎಂದು ಅಂತ ಯಡಿಯೂರಪ್ಪ ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.